Author: Janasaakshi

ನಗರದ ಪ್ರಮುಖ ಸರ್ಕಲ್ ನಲ್ಲಿ ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ ಶಿಡ್ಲಘಟ್ಟ : ನಗರದ ಸರ್ಕಲೊಂದರಲ್ಲಿ “ಕಲ್ಟ್” ಸಿನಿಮಾದ ಫ್ಲೆಕ್ಸ್ ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ದ ಬಳಸಿ ಧಮ್ಕಿ ಹಾಕಿದ್ದಾರೆ. ಈ ಆಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ ರಾಜೀವ್ ಗೌಡ ವರ್ತನೆಯ ಬಗ್ಗೆ ಅಧಿಕಾರಿಗಳ ವಲಯದಲ್ಲಿ ಸಹ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಂಗಳವಾರ ಸಂಜೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ “ಕಲ್ಟ್” ಸಿನಿಮಾದ ಪ್ರಚಾರ ಸಭೆ ನಡೆದಿತ್ತು. ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿತ್ತು,ಈ ರಸ್ತೆಯಲ್ಲಿ ಸಾಗುವಾಗ ವಾಹನಕ್ಕೆ ಈ ಫ್ಲೆಕ್ಸ್ ಅಡ್ಡಿಯಾಗಿದೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಫ್ಲೆಕ್ಸ್ ಅನ್ನು ನಗರಸಭೆ ಸಿಬ್ಬಂದಿ ಕಚೇರಿಗೆ ತಂದಿಟ್ಟಿದ್ದರು. ಈ ಬಗ್ಗೆ…

Read More

ಚಿಕ್ಕಬಳ್ಳಾಪುರ: ನಗರದ ಬಿ ಬಿ ರಸ್ತೆಯಲ್ಲಿನ ಎ ಯು ಜ್ಯುವೆಲರ್ಸ್ ನಲ್ಲಿ ಬೆಳ್ಳಿ ಆಭರಣ ದರೋಡೆ ಮಾಡಿ ರಾಜಸ್ಥಾನದ ಅಜ್ಮಿರ್ ನಲ್ಲಿ ಅಡಗಿದ್ದ ದರೋಡೆಕೋರರಿಬ್ಬರನ್ನ ಬಂಧಿಸಿರುವ ಪೊಲೀಸರು ಇಂದು ಎಯು ಜ್ಯುವೆಲರಿ ಅಂಗಡಿಗೆ ಆರೋಪಿಗಳನ್ನು ಕರೆ ತಂದು ಸ್ಥಳ ಮಹಜರು ನಡೆಸಿದರು.  ಒಟ್ಟು ಮೂರು ಜನ ಕಳ್ಳರ ಪೈಕಿ ಇಬ್ಬರನ್ನ ಪೋಲೀಸರು ಬಂಧಿಸಿದ್ದು, ಮತ್ತೊಬ್ಬನ ಬಂಧನಕ್ಕೆ ಬಲೆ ಬೀಸಿದ್ದಾರೆ ಕಳೆದ ಡಿಸೆಂಬರ್ 23 ರಂದು ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯಾದ ಬಿ.ಬಿ. ರಸ್ತೆಯಲ್ಲಿನ ಎಯು ಜ್ಯುವೆಲರಿಯಲ್ಲಿ ದರೋಡೆ ಮಾಡಿದ್ದ ಬೆಳ್ಳಿ ಆಭರಣ ಕಳ್ಳರನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಸುಮಾರು 78 ಕೆ ಜಿ ಬೆಳ್ಳಿ ಆಭರಣಗಳನ್ನ ಕಳವು ಮಾಡಿದ್ದ ಖತರ್ನಾಕ್ ಕಳ್ಳರನ್ನು ರಾಜಸ್ತಾನದ ಅಜ್ಮೀರದಲ್ಲಿ ಹಿಡಿದಿದ್ದು ಮೂವರ ಪೈಕಿ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಮತ್ತೊಬ್ಬನ ಬಂದನಕ್ಕೆ ಬಲೆ ಬೀಸಿದ್ದಾರೆ. ಬಂಧಿತ ಪ್ರಮುಖ ಆರೋಪಿ ಹನುಮಂತಸಿಂಗ್ ಹಾಗೂ ರಾಜು ಎಂದು ಗುರ್ತಿಸಲಾಗಿದೆ. ಬಂಧಿತರಿಂದ 21 ಕೆ.ಜಿ ಬೆಳ್ಳಿ ಜಪ್ತಿ ಮಾಡಲಾಗಿದೆ. ಒಟ್ಟು 78…

Read More

ಶಿಡ್ಲಘಟ್ಟ : ನಮ್ಮ ಭಾಗದ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ನಾನೂ ಒಬ್ಬ ರೈತನಾಗಿ ಸರ್ಕಾರ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದ ಜಂಗಮಕೋಟೆ ಹೋಬಳಿಯ 2823 ಎಕರೆ ಜಮೀನಿನಲ್ಲಿ ಕೃಷಿಯೋಗ್ಯವಾದ 471 ಎಕರೆ ಕೃಷಿ ಭೂಮಿಯನ್ನು ಬಿಡಿಸಿಕೊಟ್ಟಿದ್ದೇನೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರಿನಲ್ಲಿ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಸುಮಾರು 13 ಹಳ್ಳಿಗಳಲ್ಲಿ 2823 ಎಕರೆ ಜಮೀನು, ಭೂಸ್ವಾದೀನಕ್ಕೆ ಪ್ರಾಥಮಿಕ ಅಧಿಸೂಚನೆ ಸರ್ಕಾರ ಹೊರಡಿಸಿತ್ತು. ಆ ಭಾಗದಲ್ಲಿನ ರೈತರು ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಡುವಂತೆ ಕೋರಿದ್ದರು ,ಅವರಿಗೆ ಕೊಟ್ಟ ಮಾತಿನಂತೆ ಪ್ರಾಮಾಣಿಕವಾಗಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಿ 471 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನದಿಂದ ಹೊರತುಪಡಿಸಲು ಯಶಸ್ವಿಯಾಗಿದ್ದೇನೆ ಎಂದು ಅವರು ಹೇಳಿದರು. ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಅವರನ್ನು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರನ್ನು ಮತ್ತು ಕೆಐಎಡಿಬಿ ಅಧಿಕಾರಿಗಳೊಂದಿಗೆ ಹಲವು ಬಾರಿ ಮಾತನಾಡಿ, ನಮ್ಮ ಭಾಗದ…

Read More

ಶಿಡ್ಲಘಟ್ಟ : ಚಿಮುಲ್ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಇಬ್ಬರು ನಿರ್ದೇಶಕರು ಗೆಲ್ಲುವುದು ಗ್ಯಾರಂಟಿ ಎಂದು ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ತಿಳಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಚಿಮುಲ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಶಿಡ್ಲಘಟ್ಟ ವಿದಾನಸಭಾ ಕ್ಷೆತ್ರವು ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದು ಸಾಕಷ್ಟು ಚುನಾವಣೆಗಳಲ್ಲಿ ಈ ಕ್ಷೇತ್ರದ ಮತದಾರರು ಅದನ್ನು ಸಾಭೀತು ಮಾಡಿ ತೋರಿಸಿದ್ದು, ನಾವು ಮೈ ಮರೆತು ಕೂರುವಂತಿಲ್ಲ ನಮ್ಮ ಎದುರಾಳಿ ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿ ಪಕ್ಷವನ್ನು ಸಮರ್ಥವಾಗಿ ಎದುರಿಸಬೇಕಾಗಿರುವುದರಿಂದ ಎಲ್ಲಾರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು. ಕಾಂಗ್ರೆಸ್ ಬೆಂಬಲಿತರು ಅಧಿಕಾರ ಹಿಡಿದ ಡೇರಿಗಳು ಹೆಚ್ಚಾಗಿದ್ದು ಕಾಂಗ್ರೆಸ್‍ನಲ್ಲಿ ಆಕಾಂಕ್ಷಿ ಅಭ್ಯರ್ಥಿಗಳ ಸಂಖ್ಯೆ ಕೂಡ ಹೆಚ್ಚಿದೆ. ಆದರೆ ,ನಾವೆಲ್ಲರೂ ಸೇರಿ ಒಗ್ಗಟಾಗಿ ಪಕ್ಷಕ್ಕೆ ದುಡಿದ ಹಾಗೂ ಈ ಚುನಾವಣೆಯಲ್ಲಿ ಗೆಲ್ಲುವ ಸೂಕ್ತ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ…

Read More

ಶಿಡ್ಲಘಟ್ಟ : ತಾಲ್ಲೂಕಿನ ಶಿಡ್ಲಘಟ್ಟ-ಚೀಮಂಗಲ ಮುಖ್ಯ ರಸ್ತೆಯಿಂದ ನಾರಾಯಣದಾಸರ ಹಳ್ಳಿಗೆ 70 ಲಕ್ಷ ರೂ.ಗಳ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ವಿಸ್ತರಣೆ, ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಯನ್ನು ಶಾಸಕ ಬಿ.ಎನ್. ರವಿಕುಮಾ‌ರ್ ವೀಕ್ಷಿಸಿದರು. ವೀಕ್ಷಿಸಿದ ನಂತರ ಗ್ರಾಮಸ್ಥರೊಂದಿಗೆ ಮಾತನಾಡಿದ ಶಾಸಕ ಬಿ.ಎನ್. ರವಿಕುಮಾ‌ರ್ ಅವರು, ಶಿಡ್ಲಘಟ್ಟ-ಚೀಮಂಗಲ ಮುಖ್ಯ ರಸ್ತೆಯಿಂದ ನಾರಾಯಣ ದಾಸರಹಳ್ಳಿವರೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬಹು ದಿನಗಳ ಹಿಂದೆ ಡಾಂಬರು ಹಾಕಿದ್ದು, ರಸ್ತೆ ಹಾಳಾಗಿ ಸಂಚಾರಕ್ಕೆ ತೊಡಕಾಗಿತ್ತು ಹಾಗಾಗಿ ಗ್ರಾಮಸ್ಥರು ರಸ್ತೆ ಅಭಿವೃದ್ಧಿಪಡಿಸಿ ಡಾಂಬರೀಕರಣಕ್ಕೆ ಮನವಿ ಮಾಡಿದ್ದರು.  ಗ್ರಾಮಸ್ಥರ ಬಹಳ ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಶೀಘ್ರವೇ ಡಾಂಬರು ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದರು. ಕಾಮಗಾರಿಯನ್ನು ನಿಮ್ಮ, ನಮ್ಮ ತೆರಿಗೆ ಹಣದಿಂದ ಮಾಡಲಾಗುತ್ತಿದೆ ಕಾಮಗಾರಿಯ ಗುಣಮಟ್ಟ ಗಮನಿಸಬೇಕು, ಗುಣಮಟ್ಟದಲ್ಲಿ ರಾಜಿಯಾಗಬೇಡಿ ಗುಣಮಟ್ಟದಲ್ಲಿ ವ್ಯತ್ಯಾಸವಿದ್ದರೆ ನನಗೆ ಅಥವಾ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು. ರಸ್ತೆ ಅಭಿವೃದ್ಧಿ ವಿಸ್ತರಣೆ ಮತ್ತು ಡಾಂಬರೀಕರಣಕ್ಕಾಗಿ 70 ಲಕ್ಷ ರೂ.ಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿದ್ದು,…

Read More

ಶಿಡ್ಲಘಟ್ಟ : ಸುಮಾರು 350 ವರ್ಷಗಳ ಇತಿಹಾಸವಿರುವ, ನಗರದ ಸಾಂಸ್ಕೃತಿಕ ಪರಂಪರೆಯ ಕನ್ನಡಿಯಂತಿರುವ ಶಾಮಣ್ಣಬಾವಿಯನ್ನು ಕಳೆದ ಅಕ್ಟೋಬ‌ರ್ ತಿಂಗಳಿನಲ್ಲಿ ಸ್ಥಳೀಯ ಯುವಕರು ಮತ್ತು ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಸಮಿತಿಯವರು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದ್ದರು ಆದರೆ, ಅಂದು ಮೆಟ್ಟಿಲುಗಳ ಬಾವಿಯಿಂದ ತೆಗೆದು ರಸ್ತೆಯ ಪಕ್ಕದಲ್ಲಿ ಸುರಿದಿದ್ದ ತ್ಯಾಜ್ಯದ ರಾಶಿ ಹಾಗು ಗಿಡಗಂಟೆಗಳು ಮೂರು ತಿಂಗಳು ಕಳೆದರೂ ಹಾಗೆಯೇ ಬಿದ್ದಿದೆ. ಯುವಕರೆಲ್ಲರು ಸೇರಿ ಕಲ್ಯಾಣಿ ಕಾಯೋ ಕೆಲಸ ಮಾಡಿದ್ದೇವೆ, ಆದರೆ ತೆಗೆದ ಕಸ ಸಾಗಿಸೋ ತಾಳ್ಮೆ ನಗರಸಭೆಗಿಲ್ಲ ನಗರದ ಅಗ್ರಹಾರ ಬೀದಿಯ ನಿವಾಸಿಗಳ ಆಗ್ರಹವಾಗಿದೆ. ತ್ಯಾಜ್ಯವನ್ನು ತೆರವುಗೊಳಿಸದ ಕಾರಣ, ರಸ್ತೆಯಲ್ಲೇ ಬಿದ್ದಿರುವ ಆ ಮಣ್ಣು ಮತ್ತು ಕಸದ ರಾಶಿಯ ಮೇಲೆ ಈಗ ಮತ್ತೆ ಹೊಸ ಗಿಡಗಳು ಬೆಳೆಯತೊಡಗಿವೆ. ಇದು ರಸ್ತೆ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದೆ. “ನಾವು ನಮ್ಮ ಕೈಲಾದ ಕೆಲಸ ಮಾಡಿದ್ದೇವೆ. ನಗರಸಭೆಯವರು ಕನಿಷ್ಠ ಆ ಕಸವನ್ನು ದೂರ ಸಾಗಿಸಬೇಕಿತ್ತು” ಎಂದು ಶ್ರಮದಾನದಲ್ಲಿ ಪಾಲ್ಗೊಂಡಿದ್ದ ಯುವಕರು ಅಳಲು ತೋಡಿಕೊಂಡಿದ್ದಾರೆ. ಈ ಶಾಮಣ್ಣಬಾವಿ ಕೇವಲ ಬಾವಿಯಲ್ಲ, ಇದು…

Read More

ವಿಜಯಪುರ: ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ ಎಲ್ಲಾ ಮೂಲಸೌಕರ್ಯಗಳನ್ನು ಹೊಂದಿರುವ ಕನಿಷ್ಠ ಒಂದು ಉತ್ತಮ ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಇಲ್ಲಿನ ಅನ್ನಪೂರ್ಣೇಶ್ವರಿ ಕನ್ವೆನ್ಷನ್ ಹಾಲ್ ನಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ `ನಮ್ಮ ಶಾಲೆ-ನಮ್ಮ ಹೆಮ್ಮೆ 80′ ಹಾಗೂ ಅಮೃತ ಮಹೋತ್ಸವ ಸಂಭ್ರಮಾಚರಣೆಯಲ್ಲಿ `ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ಬಳಿಕ ಅವರು ಮಾತನಾಡಿದರು. ವಿದ್ಯಾದಾನಕ್ಕಿಂತ ಶ್ರೇಷ್ಠವಾದ ದಾನ ಮತ್ತೊಂದಿಲ್ಲ. ಶಾಲಾ ಶಿಕ್ಷಣಕ್ಕೆ ನಾನು ಪ್ರಥಮ ಆದ್ಯತೆ ನೀಡಿದ್ದು, ಗುಣಮಟ್ಟದ ಶಾಲೆಗಳ ನಿರ್ಮಾಣಕ್ಕಾಗಿ ಸಿಎಸ್‍ಆರ್ ಅನುದಾನದಡಿ ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯಾದ್ಯಂತ ಶಾಲೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದರು. ಶಾಲೆಯ ನಿರ್ಮಾಣ ಹಾಗೂ ಉನ್ನತೀಕರಣಕ್ಕೆ 5 ಕೋಟಿ 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೆಯ…

Read More

ಚಿಕ್ಕಬಳ್ಳಾಪುರ: ಹುಟ್ಟುಹಬ್ಬ ಆಚರಿಸುತ್ತಿದ್ದ ಸ್ವಾಮೀಜಿ ಮೇಲೆ ಸಂಬಂಧಿಕರಿಂದಲೇ ಹಲ್ಲೆ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ಗ್ರಾಮದ ಓಂಕಾರ ಜ್ಯೋತಿ ಮಠದ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ಗ್ರಾಮದ ಓಂಕಾರ ಜ್ಯೋತಿ ಮಠದ ಬಳಿ ಈ ಘಟನೆ ನಡೆದಿದ್ದು ಓಂಕಾರ ಜ್ಯೋತಿ ಮಠದ ಉಮಾಮಹೇಶ್ವರ ಸ್ವಾಮೀಜಿ ಮೇಲೆ ಜಯಮ್ಮ ಎಂಬುವವರ ಕುಟುಂಬಸ್ಥರಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ ವೃದ್ದೆ ಜಯಮ್ಮ ಅವರಿಗೆ ಯಾಮಾರಿಸಿ ಮಠದ ಜಾಗವನ್ನು ಗಿಫ್ಟ್ ಡೀಡ್ ಮಾಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಸ್ವಾಮೀಜಿಯ ಮೇಲೆ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜಯಮ್ಮರ ಸಂಬಂಧಿಕರು ಸ್ವಾಮೀಜಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆನ್ನಲಾಗಿದೆ.  ಕಳೆದ ಆರು ತಿಂಗಳ ಹಿಂದೆ ಮಠದ ಜಾಗವನ್ನು ಓಂಕಾರ ಜ್ಯೋತಿ ಮಠ ಟ್ರಸ್ಟ್ ಗೆ ಗಿಫ್ಟ್ ಡೀಡ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಮಠವನ್ನು ವರ್ಷಗಳ ಹಿಂದೆ ಮರಿಯಪ್ಪ ಸ್ವಾಮಿ ಎಂಬುವವರು ನಿರ್ಮಿಸಿದ್ದರು. ಟ್ರಸ್ಟ್ ನಲ್ಲಿ ಜಯಮ್ಮರನ್ನು ಗೌರವಾಧ್ಯಕ್ಷೆಯಾಗಿ ನೇಮಿಸಿದ್ದರೂ ಇದೀಗ ಗಿಫ್ಟ್ ಡಿಡ್ ವಿಚಾರಕ್ಕೆ ಸಂಬಂಧಿಸಿದಂತೆ…

Read More

ಚಿಕ್ಕಬಳ್ಳಾಪುರ : ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿಗಳ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ. ಕೇಂದ್ರ ಎನ್ ಡಿಎ ಸರ್ಕಾರ ಆರ್ ಎಸ್ಎಸ್ ನ ಅಣತಿಯಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಹಾಗಾಗಿ ಕರ್ನಾಟಕ ಸರ್ಕಾರ ಈ ಜನವಿರೋಧಿ ಯೋಜನೆಯನ್ನ ಜಾರಿ ಮಾಡುವುದಿಲ್ಲ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.‌ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮದ ಅಡಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಪ್ರಧಾನಿ ಮೋದಿ ಸರ್ಕಾರ ಆರ್ ಎಸ್ಎಸ್ ನ ಅಣತಿಯಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ…

Read More

ವಿಜಯಪುರ (ದೇವನಹಳ್ಳಿ): ಪಟ್ಟಣದ ಹಳೆ ಸರ್ಕಾರಿ ಆಸ್ಪತ್ರೆ ಎದುರು ಏಳು ಸುತ್ತಿನ ಕೋಟೆಯಲ್ಲಿ ನಗರ ದೇವತೆ ಶ್ರೀಅಣ್ಣಮ್ಮದೇವಿ ಯುವ ವೇದಿಕೆ ವತಿಯಿಂದ 4 ನೇ ವರ್ಷದ ಅಣ್ಣಮ್ಮದೇವಿ ಉತ್ಸವ ಜರುಗಿತು. ಶ್ರೀಅಣ್ಣಮ್ಮದೇವಿಯ ಉತ್ಸವ ಮೂರ್ತಿಗೆ ಹೂವಿನ ಅಲಂಕಾರ ಮಾಡಲಾಗಿತ್ತು. ದೇವಿಗೆ ಅಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಭಕ್ತಾಧಿಗಳು ಅಣ್ಣಮ್ಮ ದೇವಿಯ ದರ್ಶನ ಪಡೆದು ಭಕ್ತಿಯನ್ನು ಸಮರ್ಪಿಸಿದರು. ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪುರಸಭೆ ಸದಸ್ಯ ನಂದಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯು ಪಟ್ಟಣದಲ್ಲಿ ನಗರದೇವತೆ ಅಣ್ಣಮ್ಮ ದೇವಿಯ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು. ಇದರಿಂದ ಮನಸ್ಸಿಗೆ ನೆಮ್ಮದಿ, ಶಾಂತಿ ದೊರೆಯಲಿದೆ ಎಂದರು. ಉತ್ಸವ ಕಾರ್ಯಕ್ರಮದಲ್ಲಿ ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿ.ವಿ.ಬಾಲಾಜಿ, ಹೆಬ್ಬಾಳ ಕ್ಷೇತ್ರದ ಬಿಬಿಎಂಪಿ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಆನಂದ್ ಕುಮಾರ್, ಪುರಸಭೆ ಸದಸ್ಯ ನಂದಕುಮಾರ್, ಮುಖಂಡ ಸೈಫುಲ್ಲಾ, ಸಮಾಜ ಸೇವಕ ವಾಸಿಂ ಸೇರಿದಂತೆ ಹಲವು…

Read More