Author: Janasaakshi

ಚಿಕ್ಕಬಳ್ಳಾಪುರ: ತಾಲೂಕಿನ ಅಜ್ಜವಾರ ಗೇಟ್ ನಲ್ಲಿ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಜ್ಜವಾರದ ೪ ಮಂದಿ ಯುವಕರ ಸ್ವ ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ತಲಾ ೨೫ ಸಾವಿರ ಸಹಾಯಧನ ವಿತರಿಸಿದರು. ತಾಲೂಕಿನ ಅಜ್ಜವಾರ ಗ್ರಾಮಕ್ಕೆ ಭೇಟಿ ನೀಡಿದ‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಅವರು, ಟಿಪ್ಪರ್ ಲಾರಿಗಳ ಆವಳಿಯಿಂದ ಅನೇಕ ತೊಂದರೆಯಾಗುತ್ತಿದೆ. ನಾನು ಶಾಸಕನಾದಾಗಿನಿಂದ ಟಿಪ್ಪರ್ ಲಾರಿಗಳ ಓಡಾಟಕ್ಕೆ ನಿಯಂತ್ರಿಸಲು ಪ್ರಯತ್ನ ಮಾಡುತಿದ್ದೇನೆ. ಆದರೆ, ತಾಲ್ಲೂಕು ಮಟ್ಟದ ಅಧಿಕಾರಿಗಳು ತಡೆದರೆ, ಮೇಲಾಧಿಕಾರಿಗಳು, ಜಿಲ್ಲಾಡಳಿತ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾರೆ. ಟಿಪ್ಪರ್, ಕ್ರಷರ್ ಗಳಿಂದ ಯಾರಿಗೆ ಎಷ್ಟೆಷ್ಟು ಲಂಚ ಹೋಗುತ್ತಿದೆಯೋ ಗೊತ್ತಿಲ್ಲ, ಅಧಿಕಾರಿಗಳು, ಜನಪ್ರತಿನಿಧಿಗಳ ದುರಾಸೆಯಿಂದ ಅಜ್ಜವಾರ 4 ಜನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಕ್ಕಳು ಪ್ರಾಣ ಕಳೆದು ಕೊಂಡಂತಾಗಿದೆ ಎಂದು ಆರೋಪಿಸಿದರು. ಕಳೆದ ಒಂದು ತಿಂಗಳಲ್ಲಿ ಮಂಜಿನಿಂದ ರಸ್ತೆ ಅಪಘತಗಳಲ್ಲಿ 50…

Read More

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಸಮೀಪವಿರುವ ನಾಯನಹಳ್ಳಿ ಬಳಿ  ರಾಷ್ಟ್ರೀಯ ಹೆದ್ದಾರಿ  69 ಯಲ್ಲಿಗುರುವಾರ ರಾತ್ರಿ  ಟಿಪ್ಪರ್ ಹಾಗೂ ದ್ವಿ ಚಕ್ರ ವಾಹನ‌ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕು ಅಜ್ಜವಾರ ಗ್ರಾಮದ ಅರುಣ್, ಮನೋಜ್, ನರಸಿಂಹ, ನಂದೀಶ್  ಮೃತರು ಎಂದು ಗುರುತಿಸಲಾಗಿದೆ.  ಅಪಘಾತದಲ್ಲಿ ಮೃತಪಟ್ಟ ಯುವಕರು ಸ್ನೇಹಿತರಾಗಿದ್ದು, ಕ್ರಿಸ್ ಮಸ್ ಹಬ್ಬದ ಅಂಗವಾಗಿ ಗುರುವಾರ ಸಂಜೆ ಚಿಕ್ಕಬಳ್ಳಾಪುರದಲ್ಲಿರುವ ಚರ್ಚ್ ಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಗ್ರಾಮಕ್ಕೆ ಹಿಂತಿರುಗುವಾಗ ಶಿಡ್ಲಘಟ್ಟ ಕಡೆಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಚಾಲಕನ ಆಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿದ್ದ. ನಾಲ್ಕು ಮಂದಿ ಯುವಕರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಮಾಹಿತಿ ತಿಳಿದ ಕೂಡಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ,  ಗ್ರಾಮಾಂತರ ಠಾಣೆಯ ಪಿಎಸ್ ಐ ಶರಣಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ…

Read More

ಶಿಡ್ಲಘಟ್ಟ : ಆರೋಗ್ಯವೇ ಭಾಗ್ಯ ಸುಖ ಸಂತೋಷದ ಜೀವನಕ್ಕೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಅಡಿಪಾಯವಾಗಿದೆ ಉತ್ತಮ ಆಹಾರ, ನೈರ್ಮಲ್ಯ ಮತ್ತು ವ್ಯಾಯಾಮದ ಮೂಲಕ ರೋಗಗಳನ್ನು ದೂರವಿಡಬಹುದು ಎಂದು ನಗರಸಭೆ ಪೌರಾಯುಕ್ತ ಜಿ.ಅಮೃತ ತಿಳಿಸಿದರು. ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾಗರಿಕರು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉಚಿತ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಗ್ರಾಮೀಣ ಯುವ ಕಲಾ ಸಂಘದ ಅಧ್ಯಕ್ಷ ಗೊಟ್ಲ ಗುಂಟೆ ವೆಂಕಟರೋಣಪ್ಪ ಮಾತನಾಡಿ, ಗ್ರಾಮೀಣ ಹಾಗೂ ನಗರ ಪ್ರದೇಶದ ಜನರು ರೋಗ ಲಕ್ಷಣಗಳು ಕಂಡ ತಕ್ಷಣ ನಿರ್ಲಕ್ಷಿಸದೆ ಸರ್ಕಾರದ ಯೋಜನೆಗಳ ಲಾಭ ಪಡೆದು ಆರೋಗ್ಯವಂತರಾಗಿ ಬಾಳಬೇಕು ಎಂದರು. ಇದೇ ವೇಳೆ ಸಾರ್ವಜನಿಕರಲ್ಲಿ ಆರೋಗ್ಯ ಸೇವೆಗಳು ಮತ್ತು ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ನಗರದ ಸರ್ಕಾರಿ ಬಸ್ ನಿಲ್ದಾಣ ಹಾಗೂ ನಗರಸಭೆ ಕಚೇರಿ ಮುಂಭಾಗದಲ್ಲಿ ಗ್ರಾಮೀಣ…

Read More

ಶಿಡ್ಲಘಟ್ಟ : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನಾನು ಹೆಚ್ಚಿನ ಆದ್ಯತೆ ನೀಡುತ್ತಿದ್ದೇನೆ ನನ್ನ ಶಾಸಕರ ವೇತನವನ್ನು ಸಂಪೂರ್ಣವಾಗಿ ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಏಳಿಗೆಗಾಗಿ ವಿನಿಯೋಗಿಸುತ್ತಿದ್ದೇನೆ ಎಂದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮಿತ್ತನಹಳ್ಳಿ ಗ್ರಾಮದ ಸಮೀಪವಿರುವ ಶ್ರೀಸಾಯಿ ಜ್ಯೋತಿ ಇಂಟ‌ರ್ ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಮಕ್ಕಳು ಹೆಚ್ಚು ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಪಠ್ಯ ಚಟುವಟಿಕೆಗಳ ಜೊತೆಗೆ ವಸ್ತು ಪ್ರದರ್ಶನ, ಮೆಟ್ರಿಕ್ ಮೇಳ ಮತ್ತು ಪ್ರತಿಭಾ ಕಾರಂಜಿಯಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳ ಜ್ಞಾನ ವಿಕಸನಗೊಳ್ಳುತ್ತದೆ. ಮಕ್ಕಳು ಖಾಸಗಿ ಅಥವಾ ಸರ್ಕಾರಿ ಯಾವುದೇ ಶಾಲೆಯಲ್ಲಿ ಓದಿದರೂ ಉತ್ತಮ ಜ್ಞಾನ ಸಂಪಾದಿಸುವುದು ಮುಖ್ಯ ಎಂದರು. ಶಾಲೆಯ ಸಂಸ್ಥಾಪಕಿ ಜ್ಯೋತಿ ಬಸವರಾಜು ಮಾತನಾಡಿ, ಜಾಗತಿಕ ಮಟ್ಟದಲ್ಲಿ…

Read More

ದೊಡ್ಡಬಳ್ಳಾಪುರ: ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ  ಗುರುವಾರ ಮಧ್ಯಾಹ್ನ 1 ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಇತರರು ಚಾಲನೆ ನೀಡಿದರು. ಬ್ರಹ್ಮರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಸ್ವಾಮಿಗೆ ಬೆಳಗಿನ ಜಾವ 2 ಗಂಟೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮ ಆರಂಭಿಸಲಾಯಿತು. ಸುಬ್ರಹ್ಮಣ್ಯಸ್ವಾಮಿ ಹಾಗೂ ಲಕ್ಷ್ಮಿ ನರಸಿಂಹಸ್ವಾಮಿಗೆ ಹಾಲಿನಿಂದ ಅಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀಗಂಧ ಅಭಿಷೇಕ, ಭಸ್ಮದಭಿಷೇಕದ ಬಳಿಕ ಹೂವಿನ ಅಲಂಕಾರ ಮಾಡಲಾಯಿತು. ಬೆಳಗ್ಗೆ 4.30ಕ್ಕೆ ದೇವರಿಗೆ ಮಹಾಮಂಗಳಾರತಿ ಮುಗಿಸಿ ಭಕ್ತರಿಗೆ ದರ್ಶನಕ್ಕೆ ಬಿಡಲಾಯಿತು. ರಥೋತ್ಸವಕ್ಕೆ ಭಕ್ತಾದಿಗಳು ಬಾಳೆಹಣ್ಣು, ದವನ ಎಸೆಯುವ ಮೂಲಕ ತಮ್ಮ ಹರಕೆ ತೀರಿಸಿದರು.ದೇವಾಲಯವನ್ನು ಕಣ್ಮನ ಸೆಳೆಯುವಂತೆ ಪುಷ್ಪ ಮತ್ತು ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿತ್ತು. ಚಿನ್ನಾಭರಣ ಕಳ್ಳತನ ಸೇರಿ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಡ್ರೋನ್…

Read More

ಚಿಕ್ಕಬಳ್ಳಾಪುರ: ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅಂಗವಾಗಿ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ಹೆಲ್ಮೆಟ್ ವಿತರಣೆ ಹಾಗೂ ಬೈಕ್ ರ್ಯಾಲಿ ನಡೆಯಿತು. ನಗರದ ರಿಲಯನ್ಸ್ ಪೆಟ್ರೋಲ್ ಬಂಕ್ ಸಮೀಪ ನಡೆದ ಕಾರ್ಯಕ್ರಮದಲ್ಲಿ ಒಂದು ಸಾವಿರ ಹೆಲ್ಮೆಟ್ ಗಳನ್ನ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಸಂದೀಪ ಬಿ.ರೆಡ್ಡಿ ಅವರು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು, ಸಾರ್ವಜನಿಕರು ನಗರದ ಬಿ.ಬಿ. ರಸ್ತೆ ಎಂ.ಜಿ. ರಸ್ತೆ ಗಂಗಮ್ಮನ ಗುಡಿ ರಸ್ತೆ ಹಾಗೂ ಸರ್ ಎಂ ವಿ ರಸ್ತೆಗಳ ಮೂಲಕ ಬೈಕ್ ರ್ಯಾಲಿ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಸಂದೀಪ ಬಿ ರೆಡ್ಡಿ ,ಕೇವಲ ಪೊಲೀಸರು ದಂಢ ವಿಧಿಸುತ್ತಾರೆ ಎಂದು ಕಣ್ಣು ತಪ್ಪಿಸಿಕೊಳ್ಳಲು ಮತ್ತು ದಂಢದಿಂದ ಪಾರಾಗಲು ಹೆಲ್ಮೆಟ್ ಧರಿಸುವುದಲ್ಲ, ವಾಹನಗಳಲ್ಲಿ ಚಲಿಸುವಾಗ ಆಕಸ್ಮಿಕವಾಗಿ ಉಂಟಾಗುವ ಅಪಘಾತಗಳಂತಹ ಅವಘಡಗಳ…

Read More

ಚಿಕ್ಕಬಳ್ಳಾಪುರ: ತಾಲೂಕಿನ ಪೆರೇಸಂದ್ರ ಬಳಿಯ ಹೋಟೆಲ್‌ ಮುಂಭಾಗ ನಿಲ್ಲಿಸಿದ್ದ ಬಸ್ ನಲ್ಲಿ 55 ಲಕ್ಷ ರೂ.‌ನಗದು ಕಳವು ಮಾಡಿದ್ದ ನಾಲ್ವರು ಕಳ್ಳರನ್ನು ಬಂಧಿಸಿದ್ದು, ನಗದು ಹಾಗೂ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮದ್ಯ ಪ್ರದೇಶ ಮೂಲದ ಅಸ್ಲಂಖಾನ್(36), ಮುನೀರ್‌ಖಾನ್( 50), ಆಬ್ಯಾಖಾನ್ (44), ಶೇರು(35) ವರ್ಷ ನಾಲ್ಕು ಮಂದಿ ಬಂಧಿತರು. ಡಿ.8 ರಂದು ಆಂದ್ರ ಮೂಲದ ಉದ್ಯಮಿ ವೆಂಕಟೇಶ್ವರ್ ರಾವ್ ಎಂಬುವರು ಬೆಂಗಳೂರಿನ ಮಾರತ್ ಹಳ್ಳಿಯಲ್ಲಿನ ಕಟ್ಟಡವನ್ನು ಮಾರಾಟ ಮಾಡಿ ಖರೀದಿದಾರರಿಂದ 55 ಲಕ್ಷ ಹಣ ಹಾಗೂ ದಾಖಲೆಗಳನ್ನು ಪಡೆದುಕೊಂಡು ಕೆಎಸ್‌ಆರ್‌ಟಿಸಿ ಅಂಬಾರಿ ಡ್ರೀಮ್ ಕ್ಲಾಸ್ ಬಸ್‌ನಲ್ಲಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ  ವೇಳೆ ಬಸ್ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಯಿ ಡೆಲಿಕೆಸಿ ಹೋಟೆಲ್ ಬಳಿ ಬಸ್ ನಿಲ್ಲಿಸಿದ್ದ ವೇಳೆ ಊಟ ಮಾಡಲು ಹೋಗಿದ್ದ ಸಮಯದಲ್ಲಿ ಕಳ್ಳರು ಬಸ್ ನಲ್ಲಿ ಬ್ಯಾಗ್ ನಲ್ಲಿದ್ದ 55 ಲಕ್ಷ ರೂ.ಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದರು. ಬೆಂಗಳೂರಿನ ಉದ್ಯಮಿ ವೆಂಕಟೇಶ್ವರ ರಾವ್ ನೀಡಿದ್ದ…

Read More

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಕೆ.ಆರ್ ಹಳ್ಳಿ ಗೊರ್ಲತ್ತು ಬಳಿ ನಡೆದ ಬಸ್ ಅಪಘಾತದಲ್ಲಿ ೧೦ ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದು ದೊಡ್ಡ ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಷಾಧ ವ್ಯಕ್ತಪಡಿಸಿದರು. ಅಪಘಾತದ‌ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ನೋವು ತಡೆದುಕೊಳ್ಳುವಂತ ಶಕ್ತಿಯನ್ನು ದೇವರು ದಯಪಾಲಿಸಲಿ, ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ. ಗಾಯಗೊಂಡವರಿಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಅಗತ್ಯವಿರುವ ಚಿಕಿತ್ಸೆ ದೊರಕಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Read More

ಚಿತ್ರದುರ್ಗ: ಕಂಟೈನರ್ ಹಾಗೂ ಸೀಬರ್ಡ್ ಬಸ್ ನಡುವೆ ಭೀಕರ ಬಸ್ ಅಪಘಾತವಾಗಿದೆ. ಇದರಿಂದಾಗಿ ವಾಹನಗಳು ಹೊತ್ತಿ ಉರಿದಿದ್ದು,   ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೂರ್ವ ವಲಯ ಐಜಿ ರವಿಕಾಂತೇಗೌಡ ಅವರು ಹೇಳಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹೊರಟಿತ್ತು, ಎದುರಿಗೆ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿಯಾಗಿದೆ. ಗುರುವಾರ ನಸುಕಿನ ಜಾವ ಈ ಘಟನೆ ನಡೆದಿದೆ. 21 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 32 ಜನರಿದ್ದರು. ಇದರಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಾನಸ ಹಾಗೂ ಗೆಳತಿ ನವ್ಯಾ ನಾಪತ್ತೆ, ಕಂಟೈನರ್ ಚಾಲಕನ ಅಜಾಗರೂಕತೆಯಿಂದ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೃತರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಮೃತರ ಕಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Read More

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್​ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್​ ಕೋಚ್​​ ಬಸ್​​​ ರಸ್ತೆ ಮಧ್ಯೆ ಹೊತ್ತಿ ಉರಿದಿದೆ.  ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಆಂಧ್ರ ಪ್ರದೇಶದ ಕರ್ನೂಲ್ ಬಸ್‌ ದುರಂತ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಕ್ರಿಸ್​​​ಮಸ್​​ ಸಂಭ್ರಮ ಹಾಗೂ ಹೊಸ ವರ್ಷದ ಆಗಮನದ ಸಂಭ್ರಮಕ್ಕೆ ತಣ್ಣೀರೆರಚಿದೆ. ನಿನ್ನೆ ರಾತ್ರಿ ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿ ಉರಿದಿದೆ.  ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 17ಕ್ಕೂ…

Read More