ಚಿಕ್ಕಬಳ್ಳಾಪುರ : ಎಚ್ ಐ ವಿ ಸೋಂಕು ಹಾಗೂ ಏಡ್ಸ್ ಕಾಯಿಲೆಯನ್ನು ತಡೆಗಟ್ಟಲು ಜನಸಾಮಾನ್ಯರಲ್ಲಿ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಟಿ.ಪಿ ಪಿ.ರಾಮಲಿಂಗೇಗೌಡ ತಿಳಿಸಿದರು.
ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೋಲೀಸ್ ಇಲಾಖೆ, ನಂದಿ ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕ್ಷಯರೋಗ ನರ‍್ಮೂಲನಾ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಕ್ಲಬ್, ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯವೇ ಭಾಗ್ಯ ಎಂದು ಕರೆಯಲಾಗುತ್ತದೆ,ಏಕೆಂದರೆ ಆರೋಗ್ಯವಿದ್ದರೆ ಏನನ್ನಾದರೂ ಸಾಧಿಸಬಹುದು. ಆರೋಗ್ಯವಿಲ್ಲದಿದ್ದರೆ ಏನೇ ಸಾಧಿಸಿದರು ಪ್ರಯೋಜನವಿಲ್ಲ ಅದ್ದರಿಂದ ಸಮಾಜದಲ್ಲಿ ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡುವುದು ಆಡಳಿತಾಂಗದ ಮುಖ್ಯ ಕರ‍್ಯವಾಗಿರುತ್ತದೆ ಅದ್ದರಿಂದ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಪ್ರತಿ ರ‍್ಷ ವಿಶ್ವಾದ್ಯಂತ ಮಾಡಲಾಗುತ್ತದೆ “ಎಚ್.ಐ.ವಿ ಸೋಂಕು ಹಾಗೂ ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸುವುದು” ಈ ರ‍್ಷದ ಘೋಷವಾಕ್ಯವಾಗಿದೆ ಅಡೆತಡೆಗಳನ್ನು ನಿಯಂತ್ರಿಸಲು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಬಹಳ ಅಗತ್ಯವಾಗಿದೆ.ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟು ಒಳ್ಳೆಯ ದಾರಿಯಲ್ಲಿ ನಡೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಮಹೇಶ್ ಕುಮಾರ್ ಅವರು ಮಾತನಾಡಿ ಏಡ್ಸ್ ರೋಗವು ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರು ಮತ್ತು ಚಿಂತಾಮಣಿ ತಾಲೂಕಿನ ಗಡಿಭಾಗದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ್ಲಲಿ 2025 ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ 223 ಎಚ್.ಐ.ವಿ ಸೊಂಕಿತ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಕಳೆದ 2009 ರ‍್ಷ ದಿಂದ 2025 ಅಕ್ಟೋಬರ್ ಅಂತ್ಯದವರೆಗೂ ಬರೋಬ್ಬರಿ 7,603 ಮಂದಿ ಎಚ್ ಐವಿ ಸೋಂಕಿತರು ಪತ್ತೆ ಆಗಿದ್ದಾರೆ. 3,627 ಮಂದಿ ಪ್ರಸ್ತುತವೂ ಚಿಕಿತ್ಸೆ ಪಡೆಯುತ್ತಿದ್ದಾರೆ. 2,314 ಮಂದಿ ಮರಣ ಹೊಂದಿದ್ದರೆ, 689 ರೋಗಿಗಳು ಹೊರ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 18 ರಿಂದ 45ರ ವಯಸ್ಕರಲ್ಲಿ ಹೆಚ್ಚು ಎಚ್ ಐವಿ ಸೋಂಕು ದೃಢಪಟ್ಟಿದೆ . ಅನೇಕ ಅರಿವು ಮೂಡಿಸುವ ಕರ‍್ಯಕ್ರಮಗಳು ಮಾಡುವ ಮೂಲಕ ಕಳೆದ ರ‍್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಎಚ್ ಐವಿ ರೋಗಿಗಳ ಸಂಖ್ಯೆ ರ‍್ಷದಿಂದ ರ‍್ಷಕ್ಕೆ ಕಡಿಮೆ ಆಗುತ್ತಿದೆ ಎಂದು ತಿಳಿಸಿದರು.
ಏಡ್ಸ್ ರೋಗವು ಬಹುತೇಕ ಅಸುರಕ್ಷಿತ ಲೈಂಗಿಕ ಕ್ರಿಯೆ ಮೂಲಕ ಹೆಚ್ಚಾಗಿ ಹರಡುತ್ತದೆ ಹಾಗೂ ಸೋಂಕಿತ ರ‍್ಭಿಣಿಯರಿಂದ ಶಿಶುಗಳಿಗೂ ಹರಡುತ್ತದೆ.ಅಸುರಿಕ್ಷಿತ ಲೈಂಗಿಕ ಸಂರ‍್ಕ, ಒಬ್ಬರು ಬಳಸಿದ ಸೂಜಿ, ಕತ್ತರಿಯನ್ನು ಇನ್ನೊಬ್ಬರು ಬಳಸಿದಾಗ, ಸ್ತನ್ಯಪಾನದಿಂದ ಹೀಗೆ ಮುಂತಾದ ಕಾರಣಗಳಿಂದ ಏಡ್ಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುತ್ತದೆ.. ಏಡ್ಸ್ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕರ‍್ಯರ‍್ಶಿ ಬಿ ಶಿಲ್ಪಾ ಅವರು 2025ರ ವಿಶ್ವ ಏಡ್ಸ್ ದಿನದ ಘೋಷವಾಕ್ಯವಾದ “ ಹೆಚ್.ಐ.ವಿ ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸೋಣ” ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ವೇಳೆ ಏಡ್ಸ್ ನ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲಾಯಿತು. ಜಿಲ್ಲಾ ಕ್ಷಯ ರೋಗ ನರ‍್ಮಾಲನಾಧಿಕಾರಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಡಿ.ಟಿ ಉಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್ ಹಾಗೂ ಆಶಾ ಕರ‍್ಯರ‍್ತೆಯರು, ಅಂಗನವಾಡಿ ಶಿಕ್ಷಕಿಯರು ವಿದ್ಯರ‍್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು,ಸಿಬಂದಿ ರ‍್ಗದವರು ಉಪಸ್ಥಿತರಿದ್ದರು.
