ಚಿಕ್ಕಬಳ್ಳಾಪುರ: ನಗರ ಹೊರ ವಲಯದ ಸುಲಾಲಪ್ಪ ದಿನ್ನೆಯಲ್ಲಿರುವ ಶ್ರೀ ಆದಿ ಚುಂಚನಗಿರಿಶಾಖಾ ಮಠದ ಆವರಣದಲ್ಲಿರುವ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಹನುಮ ಜಯಂತಿ ಪ್ರಯುಕ್ತ ಶ್ರಿ ವೀರಾಂಜನೇಯ ಸ್ವಾಮಿಗೆ ಹೋಮ ಹವನ, ಅಭಿಷೇಕ, ಭಕ್ತಿ ಗೀತೆಗಳ ಗಾಯನ ಹಾಗೂ ವಿಶೇಷ ಪೂಜೆ ನಡೆಸುವ ಮೂಲಕ ಮಹಾ ಸಂಸ್ಥಾನ ಮಠದ ಪೀಠಾದ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಏಳು ದಿನಗಳ ವಿಶೇಷ ಹನುಮ ಜಯಂತಿಗೆ ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ ಹೊರ ವಲಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ವಹಣೆಯಲ್ಲಿ ನಡೆಯುತ್ತಿರುವ ಶ್ರೀ ವೀರಾಂಜುನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ, ಹೋಮ ಹವನ, ಅಭಿಷೇಕ ನಡೆಯಿತು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದ ನಾಥ ಸ್ವಾಮೀಜಿ ಅವರು ದೇವರಿಗೆ ಸ್ವತಃ ತಾವೇ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ಭಕ್ತಿ ಗೀತೆಗಳ ಗಾಯನ ನಡೆಸಿಕೊಟ್ಟರು. ಶ್ರೀಮಠದ ಸದ್ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತರಿಗೆ ಶ್ರೀಗಳು ಪ್ರಸಾದ ವಿತರಿಸಿ ಆಶೀರ್ವದಿಸಿದರು. ಹನುಮ ಜಯಂತಿ ಪ್ರಯುಕ್ತ ದೇವಾಲಯವನ್ನು ಹೂವು ಹಾಗೂ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ, ಆದಿಚುಂಚನಗಿರಿ ಶಾಖಾ ಮಠದ ಶ್ರೀಮಂಗಳನಾಥ ಸ್ವಾಮೀಜಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಸಿಇಓ ಡಾ.ಎನ್.ಶಿವರಾಮರೆಡ್ಡಿ, ಎಸ್‌ಜೆಸಿಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಟಿ.ರಾಜು, ನೀರಾವರಿ ಹೋರಾಟಗಾರ ಆರ್.ಆಂಜನೇಯರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

