ಶ್ರೀನಿವಾಸಪುರ: ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಮಂಗಳವಾರ ಶ್ರೀನಿವಾಸಪುರ ತಾಲೂಕಿನ ೪ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು. ಕಡತಗಳಲ್ಲಿ ಲೋಪದೋಷಗಳು ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಶ್ರೀನಿವಾಸಪುರ ತಾಲೂಕಿನ ಜೆ.ತಿಮ್ಮಸಂದ್ರ, ಆರಿಕುಂಟೆ, ದಳಸನೂರು ಹಾಗೂ ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಉಪ ಲೋಕಾಯುಕ್ತ ಬಿ.ವೀರಪ್ಪ ಮತ್ತು ಅವರ ತಂಡವು ಭೇಟಿ ನೀಡಿ ಸರ್ಕಾರದ ಪ್ರಮುಖ ಯೋಜನೆಗಳಾದ ನರೇಗಾ ಅನುಷ್ಠಾನ, ಕುಡಿಯುವ ನೀರು ಯೋಜನೆಗಳ ಪ್ರಗತಿ, ನೈರ್ಮಲ್ಯ ನಿರ್ವಹಣೆ ಮತ್ತು ಕಂದಾಯ ವಸೂಲಾತಿಗಳಿಗೆ ಸಂಬAಧಿಸಿದAತೆ ಕಡತಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು.
ಕಡತಗಳ ಪರಿಶೀಲನೆ ವೇಳೆ ಆಡಳಿತ ನಿರ್ವಹಣೆಯಲ್ಲಿನ ಹಲವು ಗಂಭೀರ ಲೋಪದೋಷಗಳು ಬೆಳಕಿಗೆ ಬಂದವು. ಮುಖ್ಯವಾಗಿ ಕೆಲ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ಕಡತ ನಿರ್ವಹಣೆಯಲ್ಲಿನ ನಿರ್ಲಕ್ಷö್ಯದ ಬಗ್ಗೆ ಉಪ ಲೋಕಾಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳದಲ್ಲಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಸಾರ್ವಜನಿಕರ ಹಣ ಸದ್ಬಳಕೆ ಮತ್ತು ಪಾರದರ್ಶಕ ಆಡಳಿತಕ್ಕೆ ಅಡೆತಡೆ ಉಂಟು ಮಾಡುವ ಯಾವುದೇ ನಿರ್ಲಕ್ಷö್ಯವನ್ನು ಸಹಿಸಲಾಗದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಜಾರಿಗೊಳಿಸುವಂತೆ ಹಾಗೂ ಕಡತಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
