ಬೆಂಗಳೂರು: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಎಂ.ಕೃಷ್ಣಾರೆಡ್ಡಿ ಅವರು ಇಂದು ಮೊದಲ ಕೋರ್ ಕಮಿಟಿ ಸಭೆ ನಡೆಸಿದರು.
ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೋರ್ ಕಮಿಟಿಯು ಪ್ರವಾಸ ಕೈಗೊಂಡು ಜಿಲ್ಲಾ ಮತ್ತು ತಾಲ್ಲೂಕು ಘಟಕಗಳನ್ನು ಪಕ್ಷದ ಚಟುವಟಿಕೆ ಮತ್ತು ಬಲವರ್ಧನೆ ಹಾಗೂ ಸಂಘಟನೆ ಚುರುಕುಗೊಳಿಸಬೇಕೆಂದು ಸೂಚನೆ ನೀಡಿದರು. ಮುಖಂಡರ ಜತೆ ಕೂಲಂಕಷವಾಗಿ ಚರ್ಚೆ ನಡೆಸಿ, ಪಕ್ಷ ಸಂಘಟನೆಯಲ್ಲಿ ಎಲ್ಲರೂ ಗಂಭೀರವಾಗಿ ತೊಡಗಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಕೋರ್ ಕಮಿಟಿ ಸದಸ್ಯರಾಎ ಮಂಜು, ಹೆಚ್.ಕೆ ಕುಮಾರಸ್ವಾಮಿ, ನೇಮಿರಾಜ್ ನಾಯ್ಕ್, ಕರೆಮ್ಮ ನಾಯಕ್, ತಿಪ್ಪೇಸ್ವಾಮಿ, ದೊಡ್ಡಗೌಡ ಪಾಟೀಲ್, ಪ್ರಸನ್ನಕುಮಾರ್, ಎ ಮಂಜುನಾಥ್, ಇಂಚರ ಗೋವಿಂದ್ ರಾಜ್, ಸಿ.ವಿ ಚಂದ್ರಶೇಖರ್, ರಾಜ ವೆಂಕಟಪ್ಪ ನಾಯಕ್, ತಿಮ್ಮರಾಯಪ್ಪ ಅವರು ಭಾಗಿಯಾಗಿದ್ದರು.
