ವಿಜಯಪುರ (ದೇವನಹಳ್ಳಿ): ಹೋಬಳಿಯ ಕೋರಮಂಗಲ ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ.ಚನ್ನೇಗೌಡ ಹಾಗೂ ಉಪಾಧ್ಯಕ್ಷರಾಗಿ ಕನಕರತ್ನಮ್ಮಬಲರಾಮ್ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕೋರಮಂಗಲ ಗ್ರಾಮದ 1ನೇ ವಾರ್ಡ್‍ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಚೆನ್ನೇಗೌಡ ಹಾಗೂ ಪರಿಶಿಷ್ಟ ಜಾತಿ (ಮಹಿಳೆ) ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಅದೇ ಗ್ರಾಮದ ಕನಕರತ್ನಮ್ಮಬಲರಾಮ್ ನೂತನವಾಗಿ ಆಯ್ಕೆಯಾದರು.
ಅಧ್ಯಕ್ಷ ಸ್ಥಾನಕ್ಕೆ ಸ್ವಪಕ್ಷದಲ್ಲಿ ಮೂವರು ಆಕಾಂಕ್ಷಿಗಳಿದ್ದರು. ಈ ಹಿಂದೆ ಕಳೆದ ಬಾರಿ ಚೆರ್ಮನ್ ಮುನಿಕೆಂಪಯ್ಯ ಕುಟುಂಬದ ಎಂ.ಕೃಷ್ಣಪ್ಪ ಅವರು ಮೊದಲ ಅವಧಿಗೆ ಅಧ್ಯಕ್ಷರಾಗಿದ್ದ ವೇಳೆ ಅನಾರೋಗ್ಯದ ನಿಮಿತ್ತ ನಿಧನರಾದರು. ಇವರ ನಿಧನದ ನಂತರ ಇನ್ನುಳಿದ ಮೊದಲ ಅವಧಿಯ ಅಧ್ಯಕ್ಷರಾಗಿ ಎಚ್.ಧನಂಜಯ್ (ಮಂಜು) ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.
ಎಂ.ಕೃಷ್ಣಪ್ಪ ಅವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಅವರ ಪುತ್ರ ಕೆ.ಚನ್ನೇಗೌಡ ಅವರು ಆಯ್ಕೆಯಾಗಿದ್ದರು. ಅದೇ ರೀತಿ ಈಗ ಕೆ.ಚನ್ನೇಗೌಡ 2 ನೇ ಅವಧಿಯ ಅಧ್ಯಕ್ಷಗಾಧಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಎರಡನೇ ಅವಧಿಗೆ ನಿಗದಿಯಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸ್ವಪಕ್ಷದಲ್ಲಿಯೇ ಇಲ್ಲಿಯವರೆಗೆ ಅಧ್ಯಕ್ಷರಾಗಿದ್ದ ಧನಂಜಯ್ ಸೇರಿ ಕೆ.ಚನ್ನೇಗೌಡ ಹಾಗೂ ಆರ್.ಹರೀಶ್ ಆಕಾಂಕ್ಷಿಗಳಾಗಿದ್ದರು. ತಾಲ್ಲೂಕಿನ ಹಿರಿಯ ಕಾಂಗ್ರೆಸ್ ಮುಖಂಡರ ನಡುವೆ ನಡೆದ ಸಂಧಾನದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಕೆ.ಚನ್ನೇಗೌಡ ಅವರನ್ನು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಎರಡನೇ ಅವಧಿಯ ಉಪಾಧ್ಯಕ್ಷ ಸ್ಥಾನಕ್ಕೆ ಕೋರಮಂಗಲ ಗ್ರಾಮದ 2 ನೇ ವಾರ್ಡಿನ ಕನಕರತ್ನಮ್ಮ ನಾಮಪತ್ರ ಸಲ್ಲಿಸಿದ್ದರು. ಪ್ರತಿಸ್ಪರ್ಧಿಯಾಗಿ ನಾಮಪತ್ರ ಯಾರು ಸಲ್ಲಿಸದ ಕಾರಣ ಉಪಾಧ್ಯಕ್ಷರಾಗಿ ಕನಕರತ್ನಮ್ಮಎಂ.ಬಲರಾಮ್ ಅವರನ್ನು ನೂತನವಾಗಿ ಆಯ್ಕೆ ಮಾಡಲಾಗಿದೆ.
10 ಮಂದಿ ಸದಸ್ಯರನ್ನು ಒಳಗೊಂಡ ಕೋರಮಂಗಲ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಪಡೆಯಲು ಒಂದು ತಿಂಗಳಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ಮಂಗಳವಾರ ನಡೆದ ಚುನಾವಣೆಯಿಂದ ತೆರೆಬಿದ್ದಿದೆ.
ದೇವನಹಳ್ಳಿ ರೇಷ್ಮೆ ಸಹಾಯಕ ನಿರ್ದೇಶಕ ಎಲ್.ಪಿ.ಧನಂಜಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರೆ, ಸಹಾಯಕರಾಗಿ ಪಿಡಿಒ ರಾಘವೇಂದ್ರ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಮಾಜಿ ಉಪಾಧ್ಯಕ್ಷ ಟಿ.ಪುಷ್ಪಶಿವರಾಜ್, ಆರ್.ಹರೀಶ್ ಕುಮಾರ್, ಗಾಯತ್ರಿತಿಲಕ್, ದಂಡಿಗಾನಹಳ್ಳಿ ದೇವರಾಜ್, ಮಂಜುಳಾಅಂಬರೀಷ್, ಗ್ರಾಮದ ಮುಖಂಡರಾದ ಚಂದ್ರಪ್ಪ, ನವೀನ್, ಮುನೇಗೌಡ, ಮುನಿರಾಜು, ರವಿಕುಮಾರ್, ರಾಕೇಶ್, ಶ್ರೀನಿವಾಸ್, ಶಿವರಾಜ್, ನಾಗೇಶ್ ಮತ್ತಿತರರು ಇದ್ದರು.
Trending
- ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ
- ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ
- ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
- ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಹಾಗು ಆಂಜಿನಪ್ಪ (ಪುಟ್ಟು)
- ಕಲ್ಯಾಣಿ ತ್ಯಾಜ್ಯವನ್ನು ತೆರವುಗೊಳಿಸಲು ನಾಗರೀಕರ ಒತ್ತಾಯ
- ಪಂಚಾಯಿತಿಗೊಂದು ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ
- ಸ್ವಾಮೀಜಿ ಮೇಲೆ ಹಲ್ಲೆ, ಗಾಯಗೊಂಡ ಸ್ವಾಮೀಜಿ ಆಸ್ಪತ್ರೆಗೆ ದಾಖಲು
