ಚಿಕ್ಕಬಳ್ಳಾಪುರ: ನಗರದ ವಾಪಸಂದ್ರದಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಇಂದು ಶ್ರೀದೇವಿ, ಭೂ ದೇವಿ ಸಮೇತ ಶ್ರೀ ರಂಗನಾಥಸ್ವಾಮಿಯ ಕಲ್ಯಾಣ ಮಹೋತ್ಸವವನ್ನು ಅತ್ಯಂತ ಶ್ರದ್ಧಾ,ಭಕ್ತಿಭಾವದಿಂದ ನೆರವೇರಿತು.
ಕಲ್ಯಾಣ ಮಹೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಧಾರ್ಮಿಕ ಸಂಭ್ರಮಕ್ಕೆ ಸಾಕ್ಷಿಯಾದರು.
ಬೆಳಿಗ್ಗೆಯಿಂದ ರಂಗನಾಥ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ,ಹೋಮ–ಹವನ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಶ್ರದ್ಧಾಪೂರ್ವಕವಾಗಿ ನೆರವೇರಿತು. ದೇವರ ದರ್ಶನಕ್ಕೆ ಆಗಮಿಸಿದ ಭಕ್ತರು ಪೂಜೆಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ವೈಕುಂಠ ಏಕಾದಶಿ ಅಂಗವಾಗಿ ಇಂದಿನಿಂದ ಶ್ರೀದೇವಿ ಭೂದೇವಿ ಸಮೇತ ಶ್ರೀರಂಗನಾಥನ ಕಲ್ಯಾಣೋತ್ಸವ ಹಾಗೂ ಏಕಾದಶಿ ವೃತಚಾರಣೆ ಹಮ್ಮಿಕೊಳ್ಳಲಾಗಿದ್ದು ಹೋಮ ಹವನ ಪಂಚಾಮೃತ ಅಭಿಷೇಕ ವೈಕುಂಠ ದ್ವಾರ ದರ್ಶನ ಮುಕ್ಕೋಟಿ ದ್ವಾದಶಿ ಪೂಜೆ ಏರ್ಪಡಿಸಲಾಗಿದೆ.
ಡಿಸೆಂಬರ್ 30 ರಂದು(ಮಂಗಳವಾರ) ನಡೆಯಲಿರುವ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ರಂಗನಾಥಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ದೀಪಾಲಂಕಾರ,ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿ, ವೈಕುಂಠದ್ವಾರ ದರ್ಶನ ಹಾಗೂ ಮುಕ್ಕೋಟಿ ದ್ವಾದಶಿ ಪೂಜೆಗಳನ್ನು ಭಕ್ತಿಭಾವದಿಂದ ಏರ್ಪಡಿಸಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯ ಸಮಿತಿ ಮನವಿ ಮಾಡಿದೆ.
Trending
- ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ
- ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ
- ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
- ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಹಾಗು ಆಂಜಿನಪ್ಪ (ಪುಟ್ಟು)
- ಕಲ್ಯಾಣಿ ತ್ಯಾಜ್ಯವನ್ನು ತೆರವುಗೊಳಿಸಲು ನಾಗರೀಕರ ಒತ್ತಾಯ
- ಪಂಚಾಯಿತಿಗೊಂದು ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ
- ಸ್ವಾಮೀಜಿ ಮೇಲೆ ಹಲ್ಲೆ, ಗಾಯಗೊಂಡ ಸ್ವಾಮೀಜಿ ಆಸ್ಪತ್ರೆಗೆ ದಾಖಲು
