ಶಿಡ್ಲಘಟ್ಟ : ಸಿಟಿಜನ್ ಶಾಲೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಕಳೆದ ಹತ್ತು ವರ್ಷಗಳಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿದ್ದು ತನ್ನದೇ ಆದಂತಹ ಹೆಸರು ಗಳಿಸಿದೆ ಎಂದು ಸಿಟಿಜನ್ ಶಾಲೆಯ ಅಧ್ಯಕ್ಷ ರಾಮಚಂದ್ರರೆಡ್ಡಿ ತಿಳಿಸಿದರು.
ನಗರದ ಸಿಟಿಜನ್ ಶಾಲೆಯ 10ನೇ ವರ್ಷದ ವಾರ್ಷಿಕೋತ್ಸವವನ್ನು ನಗರದ ಬಳಿಯ ಹಂಡಿಗನಾಳ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಪಠ್ಯಕ್ರಮದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನೈತಿಕ ಮೌಲ್ಯಗಳಿಗೆ ಶಾಲೆ ನೀಡುತ್ತಿರುವ ಮಹತ್ವವೇ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಹೇಳಿದರು.
ಶಾಲೆಯ ದಶಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವು ಶೈಕ್ಷಣಿಕ ಸಾಧನೆಗಳ ಸ್ಮರಣೆಯ ಜೊತೆಗೆ ಸಾಂಸ್ಕೃತಿಕ ಸಂಭ್ರಮವು ನಡೆಯಿತು. ದೀಪ ಬೆಳಗುವ ಮೂಲಕ ದಶಮಾನೋತ್ಸವದ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳ ನೃತ್ಯ, ಭರತನಾಟ್ಯ ಹಾಗೂ ಸಾಮಾಜಿಕ ಸಂದೇಶ ಸಾರುವ ನಾಟಕಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ಪಡೆದರು ಮಕ್ಕಳ ಕಲಾತ್ಮಕ ಪ್ರದರ್ಶನಗಳು ಪೋಷಕರನ್ನು ಮಂತ್ರ ಮುಗ್ಧಗೊಳಿಸಿದವು. ಶಾಲೆಯ ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು ಹಾಗು ಗಣ್ಯರು ಇದ್ದರು.
ಈ ಸಂದರ್ಭದಲ್ಲಿ ಮಂಗಳಮ್ಮ ರಾಮಚಂದ್ರರೆಡ್ಡಿ , ಡಾ.ಡಿ.ಟಿ.ಸತ್ಯನಾರಾಯಣ ರಾವ್ , ಸಂಸ್ಥೆಯ ಸದಸ್ಯರು ಶ್ರೀರಂಗರೆಡ್ಡಿ , ಅನಿಲ್ ಶೌರಿ ,ಭವ್ಯ ಅನಿಲ್ ಶೌರಿ ,ಅಜೇಯ್ ಶೇಖರ್ ,ಶ್ವೇತಾ ಲಕ್ಷ್ಮೀ, ಲಕ್ಷ್ಮೀ ದಿವ್ಯ , ಮಧನ ಗೋಪಾಲ್ , ಅಕ್ಷರ ಪಿ.ಯು.ಕಾಲೇಜಿನ ಪ್ರಾಂಶುಪಾಲ ಪ್ರಕಾಶ್, ಸಿಟಿಜನ್ ಶಾಲೆಯ ಪ್ರಾಂಶುಪಾಲರಾದ ಶಿವಣ್ಣ , ಕ್ರೆಸೆಂಟ್ ಶಾಲೆಯ ಅಧ್ಯಕ್ಷರಾದ ತಮೀಮ್ ಪಾಷಾ, ಡಾಲ್ಫಿನ್ ಶಾಲೆಯ ಅಶೋಕ್, ಮುಖ್ಯೋಪಾಧ್ಯಾಯ ಎಂ.ಸತೀಶ್ , ಮುಂತಾದವರು ಹಾಜರಿದ್ದರು.
Trending
- ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ
- ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ
- ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
- ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಹಾಗು ಆಂಜಿನಪ್ಪ (ಪುಟ್ಟು)
- ಕಲ್ಯಾಣಿ ತ್ಯಾಜ್ಯವನ್ನು ತೆರವುಗೊಳಿಸಲು ನಾಗರೀಕರ ಒತ್ತಾಯ
- ಪಂಚಾಯಿತಿಗೊಂದು ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ
- ಸ್ವಾಮೀಜಿ ಮೇಲೆ ಹಲ್ಲೆ, ಗಾಯಗೊಂಡ ಸ್ವಾಮೀಜಿ ಆಸ್ಪತ್ರೆಗೆ ದಾಖಲು
