ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಜಿ.ಪ್ರಭು ರವರು ಗುರುವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿ ಹೂಗುಚ್ಚ ನೀಡಿ, ಶುಭ ಕೋರಿದರು.
ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರಿಗೆ ನೂತನ ಜಿಲ್ಲಾಧಿಕಾರಿ ಜಿ. ಪ್ರಭು ರವರು ಹೂಗುಚ್ಚ ನೀಡಿ ಬಿಳ್ಕೊಡುಗೆ ನೀಡಿದರು. ನೂತನ ಜಿಲ್ಲಾಧಿಕಾರಿಗಳು ಈ ಹಿಂದೆ ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಅಧಿಕಾರ ಹಸ್ತಾಂತರ ವೇಳೆ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ನೂತನ ಜಿಲ್ಲಾಧಿಕಾರಿಗಳಿಗೆ ಶುಭ ಕೋರಿದರು.
