ಶಿಡ್ಲಘಟ್ಟ : ಅಮರಶಿಲ್ಪಿ ಜಕಣಾಚಾರಿ ಕೆಲವೊಂದು ಪ್ರಾಂತ್ಯಕ್ಕೆ ಮಾತ್ರ ಸೀಮಿತವಾದ ವ್ಯಕ್ತಿಯಲ್ಲ ಅವರು ಜಗತ್ತಿನ ಮಹಾನ್ ಪ್ರಸಿದ್ಧ ವ್ಯಕ್ತಿಯಾಗಿದ್ದರು ಅಂತಹ ಚೇತನದ ಸಂಸ್ಮರಣೋತ್ಸವ ಕಾರ್ಯದಲ್ಲಿ ಪಾಲ್ಗೊಳ್ಳುವುದು ನಮ್ಮೆಲ್ಲರ ಪುಣ್ಯ ಎಂದು ತಹಸೀಲ್ದಾರ್ ಎನ್.ಗಗನಸಿಂಧು ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗು ವಿಶ್ವಕರ್ಮ ಸಮುದಾಯದವರಿಂದ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರ್ಯರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಿಲ್ಪ ಕಲೆಗೆ ಅಪಾರ ಕೊಡುಗೆ ನೀಡಿರುವ ಅಮರ ಶಿಲ್ಪಿ ಜಕಣಾಚಾರಿ ಅವರ ಶಿಲ್ಪ ಕೆತ್ತನೆಯ ಕಲೆಗಾರಿಕೆ ಕೆಲಸವು ವಿಶ್ವವೇ ಮೆಚ್ಚುವಂತೆ ಮಾಡಿದೆ ಎಂದರು.
ಮುಖ್ಯಭಾಷಣಕಾರರಾಗಿ ಶಿಕ್ಷಕ ಸುಂದರಾಚಾರಿ ಮಾತನಾಡಿ, ವೃತ್ತಿಯಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಂಡು ಕಾಯಕವೇ ಕೈಲಾಸ ಎಂಬ ಮಾತನ್ನು ಕರಗತ ಮಾಡಿಕೊಂಡ ಅಮರಶಿಲ್ಪಿ ಜಕಣಾಚಾರಿ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು.
ಸಾವಿರಾರು ವರ್ಷಗಳ ಹಿಂದೆ ರಾಜ್ಯದ ಬೇಲೂರು ಹಳೇಬೀಡು ದೇವಸ್ಥಾನಗಳಲ್ಲಿ ಅಮರಶಿಲ್ಪಿ ಜಕಣಾಚಾರಿ ನಿರ್ಮಿಸಿರುವ ಕಲೆಯನ್ನು ಇಂದಿಗೂ ನೋಡಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್,ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರನಾರಾಯಣಾಚಾರ್,ಕಾಳಿಕಾ ಕಮ್ಮಟೇಶ್ವರ ದೇವಾಲಯದ ಅಧ್ಯಕ್ಷ ಮುನಿರತ್ನಾಚಾರಿ, ಶಿಕ್ಷಣ ಇಲಾಖೆಯ ಇಸಿಓ ಮಂಜುನಾಥ್,ಮುಖಂಡರಾದ ಕೃಷ್ಣಾಚಾರಿ,ಬೆಳ್ಳೂಟಿ ಶ್ರೀನಾಥ್,ಜಗದೀಶ್,ಬಿ.ವಿ.ಮಂಜುನಾಥ್,ಸಿ.ವಿ.ಲಕ್ಷ್ಮಣರಾಜು ಮತ್ತಿತರರು ಹಾಜರಿದ್ದರು.
