ಶಿಡ್ಲಘಟ್ಟ : ಈಗಾಗಲೇ ನೌಕರರ ಭವನ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು ಗುರುಭವನ ನಿರ್ಮಾಣ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಲಾಗುವುದು ತಾಲ್ಲೂಕಿನ ಅಭಿವೃದ್ಧಿಗಾಗಿ ಸರ್ಕಾರಿ ನೌಕರರು ಶ್ರಮವಹಿಸಬೇಕು
ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಅವರ ಗೃಹಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಆಡಳಿತ ವರ್ಗದವರ, ನೌಕರರ ಪಾತ್ರ ಮಹತ್ವಪೂರ್ಣದ್ದು ನೌಕರರ ಹಿತ ಕಾಯಬೇಕಾದ್ದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಈ ವೇಳೆ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್‌ನ್ನು ಬಿಡುಗಡೆ ಮಾಡಲಾಯಿತು,ಶಾಸಕ ಬಿ.ಎನ್.ರವಿಕುಮಾರ್ ಅವರನ್ನು ಸರ್ಕರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಎನ್.ಗಗನಸಿಂಧು, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಕಾರ್ಯದರ್ಶಿ ಕೆಂಪೇಗೌಡ, ಅಕ್ಕಲರೆಡ್ಡಿ,ಜಗದೀಶ್, ದೇವರಾಜು,ರವಿಕುಮಾರ್, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ.ವೆಂಕಟರೆಡ್ಡಿ, ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ತಾಲ್ಲೂಕು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ಮಧು, ಟಿಟಿ ನರಸಿಂಹಪ್ಪ, ವಿವಿಧ ಇಲಾಖೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
