ವಿಜಯಪುರ: ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ ಎಲ್ಲಾ ಮೂಲಸೌಕರ್ಯಗಳನ್ನು ಹೊಂದಿರುವ ಕನಿಷ್ಠ ಒಂದು ಉತ್ತಮ ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಇಲ್ಲಿನ ಅನ್ನಪೂರ್ಣೇಶ್ವರಿ ಕನ್ವೆನ್ಷನ್ ಹಾಲ್ ನಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ `ನಮ್ಮ ಶಾಲೆ-ನಮ್ಮ ಹೆಮ್ಮೆ 80′ ಹಾಗೂ ಅಮೃತ ಮಹೋತ್ಸವ ಸಂಭ್ರಮಾಚರಣೆಯಲ್ಲಿ `ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ಬಳಿಕ ಅವರು ಮಾತನಾಡಿದರು.
ವಿದ್ಯಾದಾನಕ್ಕಿಂತ ಶ್ರೇಷ್ಠವಾದ ದಾನ ಮತ್ತೊಂದಿಲ್ಲ. ಶಾಲಾ ಶಿಕ್ಷಣಕ್ಕೆ ನಾನು ಪ್ರಥಮ ಆದ್ಯತೆ ನೀಡಿದ್ದು, ಗುಣಮಟ್ಟದ ಶಾಲೆಗಳ ನಿರ್ಮಾಣಕ್ಕಾಗಿ ಸಿಎಸ್‍ಆರ್ ಅನುದಾನದಡಿ ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯಾದ್ಯಂತ ಶಾಲೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದರು.
ಶಾಲೆಯ ನಿರ್ಮಾಣ ಹಾಗೂ ಉನ್ನತೀಕರಣಕ್ಕೆ 5 ಕೋಟಿ 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೆಯ ವಿದ್ಯಾರ್ಥಿಗಳು ಅಮೃತ ಮಹೋತ್ಸವ ಸಂಭ್ರಮ ಆಯೋಜಿಸಿರುವುದು ಬಹಳ ಸಂತೋಷ ತಂದಿದೆ ಎಂದು ಹೇಳಿದರು.
ನಾನು ಕೂಡ ಈ ಶಾಲೆಯ ಹಳೆಯ ವಿದ್ಯಾರ್ಥಿ. ಇಲ್ಲಿ ಓದಿದವರು ಅನೇಕರು ವೈದ್ಯರು, ಶಿಕ್ಷಕರು, ಐಎಎಸ್ ಅಧಿಕಾರಿಗಳು, ರಾಜಕಾರಣಿಗಳು ಹೀಗೆ ಹಲವು ಕ್ಷೇತ್ರದಲ್ಲಿ ಸಾಧನೆ ತೋರಿದ್ದಾರೆ. ಇಂದಿನ ಮಕ್ಕಳೆ ನಾಳೆಯ ಪ್ರಜೆಗಳು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದ್ದು. ಶಿಕ್ಷಕರು ಮಕ್ಕಳಿಗೆ ಉತ್ತಮ ಮೌಲ್ಯಾಧಾರಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದರು.
ಬಯ್ಯಪ್ಪ ಸದಸ್ಯ ವಿ.ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಪುರಸಭಾ ಅಧ್ಯಕ್ಷೆ ಭವ್ಯ ಮಹೇಶ್, ನಿವೃತ್ತ ಐಎಎಸ್ ಅಧಿಕಾರಿ ಸೋಮಶೇಖರ್, ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಆರ್.ಸುನಂದಮ್ಮ, ಸಂತೆ ನಾರಾಯಣಸ್ವಾಮಿ, ಏರ್ ಮಾರ್ಷಲ್ ನಾಗರಾಜ್, ಡಿಡಿಪಿಐ ಬೈಲಾಂಜನಪ್ಪ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ.ಎಂ.ಕಿಶೋರ್ ಕುಮಾರ್, ಕಾರ್ಯದರ್ಶಿ ಎಂ.ಶಿವಕುಮಾರ್, ಸದಸ್ಯರಾದ ಸಂತೆ ನಾರಾಯಣಸ್ವಾಮಿ, ಎಲ್ ಕಾಳಪ್ಪ, ಬಿ.ಎಂ.ಬೈರೇಗೌಡ, ಚಂದ್ರಶೇಖರ ಹಡಪದ, ಶಾಲೆಯ ಮುಖ್ಯಶಿಕ್ಷಕಿ ಕಮಲಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Trending
- ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ
- ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ
- ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
- ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಹಾಗು ಆಂಜಿನಪ್ಪ (ಪುಟ್ಟು)
- ಕಲ್ಯಾಣಿ ತ್ಯಾಜ್ಯವನ್ನು ತೆರವುಗೊಳಿಸಲು ನಾಗರೀಕರ ಒತ್ತಾಯ
- ಪಂಚಾಯಿತಿಗೊಂದು ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ
- ಸ್ವಾಮೀಜಿ ಮೇಲೆ ಹಲ್ಲೆ, ಗಾಯಗೊಂಡ ಸ್ವಾಮೀಜಿ ಆಸ್ಪತ್ರೆಗೆ ದಾಖಲು
